
UGNEET 2026ರ ಸೀಟು ಹಂಚಿಕೆಯ ಎರಡನೇ ಸುತ್ತಿಗೆ ಆಪ್ಷನ್ಸ್ ಬದಲಾಯಿಸಲು ಅಥವಾ ತೆಗೆದುಹಾಕಲು ಸೆಪ್ಟೆಂಬರ್ 10ರ ಬೆಳಿಗ್ಗೆ 9.30ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
ಬಾಗಲಕೋಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಹೊಸದಾಗಿ ಲಭ್ಯವಿರುವ 100 ಸೀಟುಗಳು ಸೇರಿದಂತೆ ಒಟ್ಟು 150 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ ಅಭ್ಯರ್ಥಿಗಳು ಆಪ್ಷನ್ ದಾಖಲಿಸಬಹುದಾಗಿದೆ.
ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಮೂಲಕ ಲಾಗಿನ್ ಆಗಿ ತಮ್ಮ ಆಯ್ಕೆಗಳನ್ನು ಸೇವ್ ಮಾಡುವುದು ಕಡ್ಡಾಯವಾಗಿದೆ.