
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 908 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ವಿರುದ್ಧ ಜಯಗಳಿಸಿದ್ದಾರೆ.
ಈ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದು, 22,468 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ಎ.ಪಿ. ರಂಗನಾಥ್ 10,810 ಮತಗಳನ್ನು ಪಡೆದರೆ, ಪುಟ್ಟಣ್ಣ ಪರ 9,902 ಮತಗಳು ಬಂದಿವೆ.
ಸತತ ಐದು ಬಾರಿ ಗೆಲುವು ಸಾಧಿಸಿದ್ದ ಪುಟ್ಟಣ್ಣ ಈ ಬಾರಿ ಸೋಲುಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಈ ಐತಿಹಾಸಿಕ ಗೆಲುವಿಗೆ ಆಯಾ ಪಕ್ಷಗಳ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.