
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' 138ನೇ ಸಂಚಿಕೆಯಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಭಯೋತ್ಪಾದನೆ ವಿರುದ್ಧದ ನಿಲುವು ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.
2016ರ ಸರ್ಜಿಕಲ್ ಸ್ಟ್ರೈಕ್‌ಗೆ 10 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಉರಿ ದಾಳಿಯ ಬಳಿಕ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯನ್ನು ಸ್ಮರಿಸಿದ ಅವರು, ಭಯೋತ್ಪಾದನೆಗೆ ಭಾರತ ಕಠಿಣ ಉತ್ತರ ನೀಡುವ ನೀತಿಯನ್ನು ಅನುಸರಿಸುತ್ತಿದೆ ಎಂದರು.
ಮುಂದಿನ ಜನಗಣತಿಯು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಮೊಬೈಲ್ ಮೂಲಕವೂ ಮಾಹಿತಿ ದಾಖಲಿಸುವ ವ್ಯವಸ್ಥೆ ಲಭ್ಯವಿದ್ದು 13 ಭಾರತೀಯ ಭಾಷೆಗಳಲ್ಲಿ ಈ ಸೇವೆ ದೊರೆಯಲಿದೆ ಎಂದು ಪ್ರಧಾನಿ ತಿಳಿಸಿದರು.