
ಬೆಂಗಳೂರಿನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕೇಂದ್ರ ವಲಯದ ವಿರುದ್ಧ 2 ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಶಮಿ ವೃತ್ತಿಪರ ಕ್ರಿಕೆಟ್ನಲ್ಲಿ 900 ವಿಕೆಟ್ಗಳ ಮೈಲಿಗಲ್ಲು ತಲುಪಿದ್ದಾರೆ.
ಈ ಸಾಧನೆ ಮಾಡಿದ ಆರನೇ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿರುವ ಶಮಿ, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 379, ಲಿಸ್ಟ್ ಎ ನಲ್ಲಿ 283 ಮತ್ತು ಟಿ20 ಕ್ರಿಕೆಟ್ನಲ್ಲಿ 280 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಶಮಿ 16 ಓವರ್ಗಳಲ್ಲಿ 42 ರನ್ ನೀಡಿ 2 ವಿಕೆಟ್ ಪಡೆದಿದ್ದು, ಅವರ ಬೌಲಿಂಗ್ ನೆರವಿನಿಂದ ಕೇಂದ್ರ ವಲಯ ತಂಡವು ಮೊದಲ ದಿನ 266 ರನ್ಗಳಿಗೆ ಆಲೌಟ್ ಆಗಿದೆ.