
ದೇಶಾದ್ಯಂತ ನಡೆಯುವ ಜನಗಣತಿಯಲ್ಲಿ ಇದುವರೆಗೆ ಸರ್ಕಾರಿ ಸಿಬ್ಬಂದಿ ಮಾತ್ರ ಪಾಲ್ಗೊಳ್ಳುತ್ತಿದ್ದು, ಕೇಂದ್ರ ಸರ್ಕಾರವು ಈಗ ಖಾಸಗಿ ಶಾಲಾ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲು ಅವಕಾಶ ಕಲ್ಪಿಸಿದೆ.
ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ ಕುಮಾರ್ ನಾರಾಯಣ್ ಅವರು 1990ರ ಜನಗಣತಿ ನಿಯಮಗಳಿಗೆ ತಿದ್ದುಪಡಿ ತಂದು ಅಧಿಕೃತ ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದಾರೆ.
ಈ ಹೊಸ ಆದೇಶದಿಂದ ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ಬೋಧಕ ಸಿಬ್ಬಂದಿಯನ್ನು ಕಾನೂನುಬದ್ಧವಾಗಿ ಗಣತಿ ಕಾರ್ಯಕ್ಕೆ ನಿಯೋಜಿಸಬಹುದಾಗಿದೆ.