
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯವು 21 ಸ್ಟೆನೋಗ್ರಾಫರ್ ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,425 ರಿಂದ 83,700 ರೂ. ವೇತನ ಸಿಗಲಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು 12ನೇ ತರಗತಿ ಅಥವಾ ಪಿಯುಸಿ ಜೊತೆಗೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು, ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.