
ದೆಹಲಿಯ ವಿಜ್ಞಾನ ಭವನದ ಬದಲು ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು 'ಏಕತಾ ನಗರ'ದಲ್ಲಿ ಆಯೋಜಿಸಲಾಗಿದೆ.
ಸಿನಿಮಾ ಮತ್ತು ಪ್ರವಾಸೋದ್ಯಮವನ್ನು ಒಟ್ಟಿಗೆ ಜೋಡಿಸುವ ಮೂಲಕ ಪ್ರವಾಸಿ ತಾಣಗಳಿಗೆ ಉತ್ತೇಜನ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಟ ಅನಂತ್ ನಾಗ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.