
ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರೆಲ್ಲರೂ ದಿಂಡಿಗಲ್‌ನ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಕಾಲೇಜಿನವರಾಗಿದ್ದು, ರಾತ್ರಿ 11.40ರ ಸುಮಾರಿಗೆ ಗುರುವಾಯೂರು ದೇವಸ್ಥಾನದ ದರ್ಶನ ಮುಗಿಸಿ ಕೊಡುಂಗಲ್ಲೂರು ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕೈಪಮಂಗಲಂ ಪೊಲೀಸರು ಲಾರಿ ಚಾಲಕನ ನಿರ್ಲಕ್ಷ್ಯದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ರವಾನಿಸಲಾಗಿದೆ.