
ನೀಟ್ ಪರೀಕ್ಷೆ ಕುರಿತ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಸಿ.ಟಿ. ರವಿ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.