
ಕರ್ನಾಟಕದ ತಂಬಾಕು ಉತ್ಪನ್ನಗಳ ಉತ್ಪಾದನಾ ಸಂಸ್ಥೆಗಳ ಪ್ರತಿನಿಧಿಗಳಿಗೆ ವಡ್ಗಾಂವ್ ಪೊಲೀಸ್ ಠಾಣೆ ನೀಡಿರುವ ನೋಟಿಸ್ ಕಾನೂನುಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಅರ್ಜಿದಾರರ ಕಚೇರಿಯಲ್ಲಿ ಲೆಡ್ಜರ್ ಪುಸ್ತಕಗಳು ಹಾಗೂ ವ್ಯಾಪಾರ ದಾಖಲೆಗಳನ್ನು ವಶಪಡಿಸಿಕೊಂಡಿರುವುದು ಕಾನೂನುಬಾಹಿರ ಎಂದು ಘೋಷಿಸಿರುವ ನ್ಯಾಯಾಲಯ, ಅವುಗಳನ್ನು ವಾಪಸ್ ನೀಡುವಂತೆ ಆದೇಶಿಸಿದೆ.
ಭವಿಷ್ಯದಲ್ಲಿ ಕರ್ನಾಟಕದ ವ್ಯಾಪ್ತಿಯಲ್ಲಿ ತನಿಖಾ ಕಾರ್ಯಾಚರಣೆ ನಡೆಸುವ ಮುನ್ನ ಸ್ಥಳೀಯ ಪೊಲೀಸ್ ಠಾಣೆಗೆ ಮುಂಚಿತವಾಗಿ ಲಿಖಿತ ಮಾಹಿತಿ ನೀಡಬೇಕು ಎಂದು ಮಹಾರಾಷ್ಟ್ರ ಪೊಲೀಸರಿಗೆ ನಿರ್ದೇಶಿಸಲಾಗಿದೆ.