Economy
15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ವಿಳಂಬ: ಗ್ರಾಮ ಪಂಚಾಯಿತಿಗಳ ನಿರ್ವಹಣೆಗೆ ಸಂಕಷ್ಟ

15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ವಿಳಂಬ: ಗ್ರಾಮ ಪಂಚಾಯಿತಿಗಳ ನಿರ್ವಹಣೆಗೆ ಸಂಕಷ್ಟ

prajavani1h
THE BRIEF
1

ಕೇಂದ್ರ ಸರ್ಕಾರದಿಂದ ಕಳೆದ ಒಂದೂವರೆ ವರ್ಷದಿಂದ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದ ಶೇ 90ರಷ್ಟು ಗ್ರಾಮ ಪಂಚಾಯಿತಿಗಳು ನಿರ್ವಹಣೆಗೆ ಪರದಾಡುತ್ತಿವೆ.

2

ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಬೀದಿ ದೀಪ ಮತ್ತು ಕುಡಿಯುವ ನೀರಿನ ಪಂಪ್ ಸೆಟ್ ಗಳ ವಿದ್ಯುತ್ ಬಿಲ್ ಲಕ್ಷಗಟ್ಟಲೆ ಬಾಕಿ ಉಳಿದಿದ್ದು, ಮೆಸ್ಕಾಂ ಅಧಿಕಾರಿಗಳು ನೋಟಿಸ್ ಜಾರಿಗೊಳಿಸುತ್ತಿದ್ದಾರೆ.

3

ಅನುದಾನ ತಡೆಹಿಡಿಯಲು ದಾಖಲೆಗಳಲ್ಲಿ ವ್ಯತ್ಯಾಸವಿರುವುದು, ದಂಡದ ಬಡ್ಡಿ ಪಾವತಿಸದಿರುವುದು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸದಿರುವುದು ಕಾರಣ ಎಂದು ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ತಿಳಿಸಿದ್ದಾರೆ.