
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಕಪಿಲ್ ದೇವ್ ಮತ್ತು ಸುನಿಲ್ ಗವಾಸ್ಕರ್ ಸೇರಿದಂತೆ 21 ಕ್ರಿಕೆಟ್ ನಾಯಕರು ಪಾಕ್ ಪ್ರಧಾನಿಗೆ ಮನವಿ ಪತ್ರ ಬರೆದಿದ್ದಾರೆ.
ಅದಿಯಾಲಾ ಜೈಲಿನಲ್ಲಿರುವ ಖಾನ್ ಅವರ ಬಲಗಣ್ಣಿನ ದೃಷ್ಟಿ ಶೇ 85ರಷ್ಟು ಕಡಿಮೆಯಾಗಿದ್ದು, ಅವರಿಗೆ ತಕ್ಷಣವೇ ಸ್ವತಂತ್ರ ವೈದ್ಯಕೀಯ ತಪಾಸಣೆ ಒದಗಿಸಬೇಕೆಂದು ದಿಗ್ಗಜರು ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕುಟುಂಬದ ಭೇಟಿಗೆ ಅವಕಾಶ ಕಲ್ಪಿಸಬೇಕು ಮತ್ತು ವೈದ್ಯಕೀಯ ಶಿಫಾರಸುಗಳನ್ನು ಯಾವುದೇ ಅಡೆತಡೆಯಿಲ್ಲದೆ ಜಾರಿಗೆ ತರಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.