
ಅಕ್ರಮ ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳ ಪ್ರಚಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ನಿಧಿ ಅಗರ್ವಾಲ್ ಅವರು ಆಗಸ್ಟ್ 19ರಂದು ಹೈದರಾಬಾದ್ನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಪ್ರಕರಣದಲ್ಲಿ ಇದುವರೆಗೆ 21ಕ್ಕೂ ಹೆಚ್ಚು ಸೆಲೆಬ್ರಿಟಿಗಳು ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ತೀವ್ರಗೊಂಡಿದೆ.
ಹೈದರಾಬಾದ್ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ 32 ವರ್ಷದ ಉದ್ಯಮಿ ಪಿ.ಎಂ. ಫಣೀಂದ್ರ ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ಈ ತನಿಖೆ ಆರಂಭವಾಗಿದೆ.