
ದಕ್ಷಿಣ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಕನಿಷ್ಠ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ದೆಹಲಿ ಅಗ್ನಿಶಾಮಕ ಸೇವೆಯ 5 ವಾಹನಗಳು ಧಾವಿಸಿದ್ದು, ಜೆಸಿಬಿ ಮತ್ತು ಗ್ಯಾಸ್ ಕಟ್ಟರ್‌ಗಳ ಬಳಸಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ಕುಸಿದ ಕಟ್ಟಡವು ಹಾಸ್ಟೆಲ್ ಆಗಿ ಬಳಕೆಯಾಗುತ್ತಿತ್ತೇ ಅಥವಾ ನವೀಕರಣ ಕಾಮಗಾರಿ ನಡೆಯುತ್ತಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಏಮ್ಸ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.