
ದೆಹಲಿಯ ಪ್ರತಿಭಟನೆಗಳ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದಕ್ಷಿಣ ಭಾರತದತ್ತ ಮುಖ ಮಾಡಿದ್ದು, ನವೆಂಬರ್ 7ರಂದು ಕೊಚ್ಚಿಯ ರಾಜೇಂದ್ರ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಿದೆ.
ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೇರಿದಂತೆ ಪ್ರಮುಖ ನಾಯಕರು ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪಕ್ಷದ ನಾಯಕರು ಬಂಧನಕ್ಕೊಳಗಾಗಿದ್ದರು. ಇದೀಗ ಕೇರಳದಲ್ಲಿ ನಡೆಯಲಿರುವ ಈ ಹೋರಾಟ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.