
ಕರ್ನಾಟಕ ಹೈಕೋರ್ಟ್ಗೆ ಆರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಸೇಡಂ ಮೂಲದ ಹೇಮಾ ಕುಲಕರ್ಣಿ ಅವರು ನೂತನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, ಆ.9ರಂದು ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೇಮಾ ಕುಲಕರ್ಣಿ ಅವರು 27 ವರ್ಷಗಳ ವಕೀಲ ವೃತ್ತಿಯಲ್ಲಿ ಇಡಿ, ಯುಜಿಸಿ ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.