
ಕಬ್ಬಿಗೆ ಪ್ರತಿ ಟನ್ಗೆ 5,500 ರೂ. ದರ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲೆಯ 15ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ರೈತರು ಮುತ್ತಿಗೆ ಹಾಕಿದ್ದಾರೆ.
ರೈತ ಮುಖಂಡರಾದ ಚೂನಪ್ಪ ಪೂಜಾರಿ ಮತ್ತು ಶಶಿಕಾಂತ ಗುರೂಜಿ ನೇತೃತ್ವದಲ್ಲಿ ನಿಪ್ಪಾಣಿ-ಮೂಡಲಗಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಕ್ಕರೆ ಮಾರಾಟವನ್ನು ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡಲಾಗಿದೆ.
ಕಬ್ಬಿನ ದರ ನಿಗದಿ ಕುರಿತು ಚರ್ಚಿಸಲು ನಾಳೆ ಕಾರ್ಖಾನೆ ಮಾಲೀಕರ ಸಭೆ ನಡೆಯಲಿದ್ದು, ಈ ಸಮಸ್ಯೆಯನ್ನು ಆಲಿಸಲು ಕೇಂದ್ರ ಸರ್ಕಾರದ ಸಮಿತಿಯು ಬೆಳಗಾವಿಗೆ ಆಗಮಿಸುತ್ತಿದೆ.