
2027ರ ಅಕ್ಟೋಬರ್ 4 ರಿಂದ ನವೆಂಬರ್ 21ರವರೆಗೆ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಭಾರತ, ಆಸ್ಟ್ರೇಲಿಯಾ ಸೇರಿದಂತೆ 10 ತಂಡಗಳು ನೇರ ಅರ್ಹತೆ ಪಡೆದುಕೊಂಡಿವೆ.
ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಲಿದ್ದು, ಉಳಿದ 4 ಸ್ಥಾನಗಳಿಗಾಗಿ ಫೆಬ್ರವರಿ 22ರಿಂದ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ.
ಐಸಿಸಿ ನಿಯಮದಂತೆ ಆತಿಥೇಯ ಸೌತ್ ಆಫ್ರಿಕಾ ಮತ್ತು ಝಿಂಬಾಬ್ವೆ ನೇರವಾಗಿ ಆಯ್ಕೆಯಾಗಿದ್ದರೆ, ಉಳಿದ 8 ತಂಡಗಳು ಐಸಿಸಿ ಏಕದಿನ ಶ್ರೇಯಾಂಕದ ಆಧಾರದ ಮೇಲೆ ಸ್ಥಾನ ಗಿಟ್ಟಿಸಿಕೊಂಡಿವೆ.