
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತ ಉಂಟಾಗಿರುವುದರಿಂದ ರೈಲು ಸಂಚಾರಕ್ಕೆ ಅಡಚಣೆಯಾಗಿದೆ.
ಯಶವಂತಪುರ–ಕಾರವಾರ ಎಕ್ಸ್ಪ್ರೆಸ್, ಗೊಮ್ಮಟೇಶ್ವರ ಎಕ್ಸ್ಪ್ರೆಸ್ ಮತ್ತು ಪಂಚಗಂಗಾ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಇಂದು ಸ್ಥಗಿತಗೊಳಿಸಲಾಗಿದೆ.
ರೈಲ್ವೆ ಹಳಿ ಮೇಲೆ ಮಣ್ಣು ಮತ್ತು ಕೆಸರು ತುಂಬಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.