ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 'ವೋಟ್ ಚೋರಿ' ಜಾರಿಗೆ ತಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾದಲ್ಲಿ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ಅವರು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಬೇಕು ಎಂದು ಅವರು ಕಿಡಿಕಾರಿದ್ದಾರೆ.
ಇದಕ್ಕೂ ಮೊದಲು ಗೋವಾದ ಮರ್ಗೋವಾದಲ್ಲಿ ಆಯೋಜಿಸಿದ್ದ 'ಗೋಯ್ ರಖೋನ್ ಯಾತ್ರೆ'ಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿ 2 ಕಿಮೀ ಪಾದಯಾತ್ರೆ ನಡೆಸಿದರು.