
ಕಲಬುರಗಿ ತಾಲೂಕಿನ ಹಾಗರಗಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೇದಾಂಗ್ ಅವರು ಆಸ್ತಿ ವರ್ಗಾವಣೆ ಮಾಡಿಕೊಡಲು 9,950 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಮರಣ ಪ್ರಮಾಣಪತ್ರ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದರಿಂದ ದೂರುದಾರ ಸಂಜೀವ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ಲೋಕಾಯುಕ್ತ ಇನ್‌ಸ್ಪೆಕ್ಟರ್ ರವಿ ಪವಾರ್ ನೇತೃತ್ವದ ತಂಡವು ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.