
ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸುವ ಕುರಿತು ಶಿಕ್ಷಣ ತಜ್ಞರು ಮತ್ತು ಸಾಹಿತಿಗಳ ಒಕ್ಕೂಟದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಎಐ ಬಳಕೆಗೆ ಅವಕಾಶ ನೀಡುವ ಮುನ್ನ ಮಕ್ಕಳ ವಯಸ್ಸು ಮತ್ತು ಕಲಿಕೆಯ ಹಂತವನ್ನು ಪರಿಗಣಿಸಿ ಸಮಗ್ರ ಸಾರ್ವಜನಿಕ ಚರ್ಚೆ ನಡೆಸುವಂತೆ ಮುಖ್ಯಂತ್ರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ.
ಎಐ ಅತಿಯಾದ ಬಳಕೆಯಿಂದ ಮಕ್ಕಳ ಸ್ವತಂತ್ರ ಚಿಂತನೆ, ವಿಶ್ಲೇಷಣಾ ಸಾಮರ್ಥ್ಯ ಕುಂಠಿತಗೊಳ್ಳಬಹುದು ಎಂದು ಶಿಕ್ಷಣ ವಲಯದಲ್ಲಿ ಆತಂಕ ವ್ಯಕ್ತವಾಗಿದೆ.