
ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ತಗುಲಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ.
ಬೈಕ್ ಸವಾರ ರಾಘವ ಪ್ರಭು ಅವರ ಕಾಲಿಗೆ ಗುಂಡು ತಗುಲಿದ್ದು, ಮತ್ತೊಬ್ಬ ಸವಾರ ಧನರಾಜ್ ಅವರ ಜೇಬಿನಲ್ಲಿದ್ದ ಮೊಬೈಲ್ಗೆ ಗುಂಡು ತಗುಲಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅರಣ್ಯಾಧಿಕಾರಿಗಳು ಚಿಕಿತ್ಸಾ ವೆಚ್ಚ ಭರಿಸಿ ರಾಜಿ ಸಂಧಾನ ಮಾಡಿಕೊಂಡಿದ್ದರಿಂದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇಲಾಖೆಯ ಅಜಾಗರೂಕತೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.