
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ 359 ಮಂದಿ ಮೃತಪಟ್ಟಿದ್ದು, ಉತ್ತರ ಪ್ರದೇಶದ ಮಹಾರಾಜ್ಗಂಜ್ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ನೇಪಾಳದಿಂದ ಹರಿದು ಬರುವ ಗಂಡಕಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನದಿ ತೀರದ ಗ್ರಾಮಗಳ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.
ಭೋಟೆ ಕೋಶಿ ನದಿಯ ಮೇಲ್ಭಾಗದಲ್ಲಿ ಬ್ಯಾರಿಯರ್ ಲೇಕ್ ನಿರ್ಮಾಣವಾಗಿರುವುದರಿಂದ, ಅದು ಒಡೆದರೆ ಕೆಳಭಾಗದ ಪ್ರದೇಶಗಳಲ್ಲಿ ಮತ್ತಷ್ಟು ಪ್ರವಾಹ ಉಂಟಾಗುವ ಭೀತಿ ಎದುರಾಗಿದೆ.