
ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಸೆಪ್ಟೆಂಬರ್ 7ರಂದು ಬೆಳಿಗ್ಗೆ 7:30 ರಿಂದ 7:45ರ ನಡುವೆ ನಡೆದ ರಸ್ತೆ ಅಪಘಾತದಲ್ಲಿ 5 ವರ್ಷದ ಬಾಲಕ ಭವೀನ್ ಮೃತಪಟ್ಟಿದ್ದಾನೆ.
ತಾಯಿ ಶುಭಲತಾ ಜೊತೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾಗ, ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಗು ರಸ್ತೆಗೆ ಬಿದ್ದಿದೆ.
ರಸ್ತೆಗೆ ಬಿದ್ದ ಮಗುವಿನ ಮೇಲೆ ಹಿಂದಿನಿಂದ ಬಂದ ಟಿಪ್ಪರ್ ಹರಿದಿದ್ದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.