
ಪರಿಸರ ಮಾಲಿನ್ಯವನ್ನು ತಡೆಯುವ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ದೀಪಾವಳಿ ಹಬ್ಬದಂದು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.
ರಾಜ್ಯದಲ್ಲಿ ಈ ಬಾರಿ ಕೇವಲ ಹಸಿರು ಪಟಾಕಿಗಳ ಮಾರಾಟ ಹಾಗೂ ಬಳಕೆಗೆ ಮಾತ್ರ ಅವಕಾಶವಿದ್ದು, ಕ್ಯೂಆರ್ ಕೋಡ್ ಪರಿಶೀಲಿಸಿ ಅಧಿಕೃತ ಮಾರಾಟಗಾರರಿಂದಲೇ ಖರೀದಿಸುವಂತೆ ಸೂಚಿಸಲಾಗಿದೆ.
ನಿಯಮ ಉಲ್ಲಂಘಿಸಿ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡಿದರೆ ಅಥವಾ ನಿಗದಿಪಡಿಸಿದ ಸಮಯದ ಹೊರತಾಗಿ ಸಿಡಿಸಿದರೆ ಕಠಿಣ ಕಾನೂನು ಕ್ರಮ ಹಾಗೂ ದಂಡ ವಿಧಿಸಲಾಗುತ್ತದೆ.