
ಕರ್ನಾಟಕದಲ್ಲಿ ನಡೆಯುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣಗಳಿಂದ ರಾಜ್ಯದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.
ದೆಹಲಿಗೆ ಹೋದಾಗೆಲ್ಲಾ ಈ ವಿಷಯದ ಬಗ್ಗೆ ಪ್ರಶ್ನೆ ಎದುರಿಸಬೇಕಾಗಿದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಥವಾ ಮೈತ್ರಿ ಆಡಳಿತ ಬರಬೇಕು ಎಂದು ಅಭಿಪ್ರಾಯಪಟ್ಟರು.
2028ರ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವ ಸಾಧ್ಯತೆಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು.