
ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನೆಮಾ ಟಿಕೆಟ್ ದರದ ಮೇಲೆ ಶೇ 2ರಷ್ಟು ಸೆಸ್ ವಿಧಿಸುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ವಿವರಣೆ ಒದಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಾರ್ಮಿಕರ ಸಾಮಾಜಿಕ ಭದ್ರತಾ ಕಲ್ಯಾಣ ಕಾಯ್ದೆ-2024ರ ಅಡಿ 2026ರ ಸೆಪ್ಟೆಂಬರ್ 1ರಿಂದ ಕಡ್ಡಾಯವಾಗಿ ಸೆಸ್ ಸಂಗ್ರಹಿಸಬೇಕು’ ಎಂದು ಕಾರ್ಮಿಕ ಆಯುಕ್ತರು 2026ರ ಆಗಸ್ಟ್ 29ರಂದು ಸುತ್ತೋಲೆ ಹೊರಡಿಸಿದ್ದರು.
ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿದಾರರಾದ ‘ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ‘, ‘ಪಿವಿಆರ್ ಐನಾಕ್ಸ್ ಲಿಮಿಟೆಡ್’ ಮತ್ತು ಶಂತನು ಪೈ ಸಲ್ಲಿಸಿರುವ ರಿಟ್ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿ, ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ.