Health & Environment
ಕರ್ನಾಟಕದಲ್ಲಿ ಇಂದಿನಿಂದ ಹಲವೆಡೆ ಭಾರಿ ಮಳೆ ನಿರೀಕ್ಷೆ

ಕರ್ನಾಟಕದಲ್ಲಿ ಇಂದಿನಿಂದ ಹಲವೆಡೆ ಭಾರಿ ಮಳೆ ನಿರೀಕ್ಷೆ

oneindia8h
THE BRIEF
1

ಕರ್ನಾಟಕದಲ್ಲಿ ಸೆಪ್ಟೆಂಬರ್ 28ರಂದು ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

2

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

3

ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಾಧಾರಣದಿಂದ ತುಂತುರು ಮಳೆಯಾಗುವ ನಿರೀಕ್ಷೆಯಿದ್ದು, ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.