
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ 60 ಸಾವಿರ ರೂ. ಸುಲಿಗೆ ಮಾಡಿದ ಆರೋಪದಲ್ಲಿ ನಾಲ್ವರು ಯೂಟ್ಯೂಬರ್ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಲ್ಲಪ್ಪ ಮಾಳಾಜ್, ಮಲ್ಲಿಕಾರ್ಜುನ ಜುಲಫಿ, ಪೃಥ್ವಿರಾಜ್ ಚವ್ಹಾಣ ಮತ್ತು ಡೇವಿಡ್ ತಂಗೇರಾಳ ಎಂದು ಗುರುತಿಸಲಾಗಿದ್ದು, ಅವರಿಂದ ಕಾರು ಮತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಗಾಂಜಾ ಪ್ಯಾಕೆಟ್ ನೀಡಿ ವಿಡಿಯೊ ಚಿತ್ರೀಕರಿಸಿ, 3 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಮತ್ತು ಹಣ ನೀಡದಿದ್ದಾಗ ವಿಡಿಯೊವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.