
ಪಕ್ಷದ ಚಳವಳಿಗಿಂತ ಕುಟುಂಬದ ಸಂಬಂಧಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಮಾಯಾವತಿ ಉಚ್ಚಾಟಿಸಿದ್ದಾರೆ.
ಆಕಾಶ್ ಆನಂದ್ ತಮ್ಮ ರಾಜಕೀಯ ಭವಿಷ್ಯ ಮತ್ತು ಪಕ್ಷದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ ಎಂದು ಮಾಯಾವತಿ 'ಎಕ್ಸ್' ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2023ರ ಡಿಸೆಂಬರ್‌ನಲ್ಲಿ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದ ಮಾಯಾವತಿ, ಇದೀಗ ಅವರ ಕಿರಿಯ ಸಹೋದರ ಇಶಾನ್ ಆನಂದ್ ಅವರನ್ನು ಮುಂಚೂಣಿಗೆ ತಂದಿದ್ದಾರೆ.