
ಹಿರಿಯ ನಟ ಸಾಯಿ ಕುಮಾರ್ ಅವರ ಪುತ್ರ ಆದಿ ನಟಿಸಲಿರುವ ‘ಆದಿ ರುದ್ರ’ ಸಿನಿಮಾವನ್ನು ತ್ರಿಶೂಲ್ ಎಂಟರ್‌ಟೈನ್‌ಮೆಂಟ್ಸ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಿಸುತ್ತಿದ್ದಾರೆ.
ದೈವಿಕ ನಿಗೂಢತೆ ಹಾಗೂ ರೋಚಕ ಸನ್ನಿವೇಶಗಳನ್ನು ಒಳಗೊಂಡ ಈ ಪ್ಯಾನ್ ಇಂಡಿಯಾ ಚಿತ್ರವು ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿದ್ಧವಾಗಲಿದೆ.
ನವರಸನ್ ನಿರ್ದೇಶನ ಹಾಗೂ ಅಜನೀಶ್ ಬಿ. ಲೋಕನಾಥ್ ಸಂಗೀತ ಸಂಯೋಜನೆ ಹೊಂದಿರುವ ಈ ಚಿತ್ರದ ಚಿತ್ರೀಕರಣ 2027ರ ಜನವರಿಯಲ್ಲಿ ಆರಂಭವಾಗಲಿದೆ.