
ಕರ್ನಾಟಕದಲ್ಲಿ ಮಳೆಯ ತೀವ್ರ ಅಭಾವದಿಂದ ಬಳ್ಳಾರಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಮುಂಗಾರು ಅವಧಿಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಒಟ್ಟು 2,178 ಕೊಳವೆಬಾವಿಗಳನ್ನು ಕೊರೆಸಲಾಗಿದ್ದು, ಅವುಗಳಲ್ಲಿ 200ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿಹೋಗಿವೆ.
ನೀರಿನ ಕೊರತೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್‌ಗಳು ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಆರಂಭಿಸಲಾಗಿದೆ.