
ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 108 ಆ್ಯಂಬುಲೆನ್ಸ್ ನೌಕರರು ನಾಳೆ ರಾತ್ರಿ 8 ಗಂಟೆಯಿಂದ ಸೇವೆ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.
ಸರ್ಕಾರವು ನಾಳೆ ಸಂಜೆ ವೇಳೆಗೆ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ, ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ.
ಈ ಸೇವೆ ಸ್ಥಗಿತಗೊಂಡರೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾರ್ವಜನಿಕರಿಗೆ ಹಾಗೂ ತುರ್ತು ಆರೋಗ್ಯ ಸೇವೆಗೆ ತೀವ್ರ ಸಮಸ್ಯೆ ಎದುರಾಗುವ ಆತಂಕ ಉಂಟಾಗಿದೆ.