
ರಾಜ್ಯ ಸರ್ಕಾರವು ಆಡಳಿತಾತ್ಮಕ ಕಾರಣಗಳಿಂದ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಗೃಹ ಇಲಾಖೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಲಾಗಿದೆ.
ಪಿ. ಹರಿಶೇಖರನ್ ಅವರನ್ನು ಡಿಸಿಆರ್ಇಗೆ, ಆರ್. ಚೇತನ್ ಅವರನ್ನು ಪಶ್ಚಿಮ ವಲಯದ ಐಜಿಪಿಯಾಗಿ ಮತ್ತು ನಿಕ್ಕಮ್ ಪ್ರಕಾಶ್ ಅವರನ್ನು ಬೆಳಗಾವಿ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.