
ಬಿಜೆಪಿಯ ಹಿರಿಯ ಮಹಿಳಾ ನಾಯಕಿ ಮತ್ತು ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿಗಳು ಅಕ್ಟೋಬರ್ 12ರಂದು ಆದೇಶ ಹೊರಡಿಸಿದ್ದು, ಅವರು ಅಕ್ಟೋಬರ್ 16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನೂತನ ರಾಜ್ಯಪಾಲೆಯಾಗಿ ಪ್ರಮಾಣವಚನ ಸ್ವೀಕರಿಸಲು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಕ್ಟೋಬರ್ 15ರಂದು ಆಗಮಿಸಿದರು.
ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುಧಾ ಯಾದವ್ ಅವರನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವ ಕೆ.ಹೆಚ್. ಮುನಿಯಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ವಾಗತಿಸಿದರು.