
ದೆಹಲಿಯಲ್ಲಿ ರಸ್ತೆ ಕಾಮಗಾರಿ ಗುಣಮಟ್ಟ ತಪಾಸಣೆ ನಡೆಸುತ್ತಿದ್ದ ವೇಳೆ ಉಪ ಮುಖ್ಯಮಂತ್ರಿ ಪರ್ವೇಶ್ ವರ್ಮಾ ಅವರು ವ್ಯಕ್ತಿಯೊಬ್ಬರ ಮೊಬೈಲ್ ಎಳೆದುಕೊಂಡು ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆವೇಶದಲ್ಲಿ ನಡೆದ ಘಟನೆ ಇದು ಎಂದು ಡಿಸಿಎಂ ವರ್ಮಾ ಸಮರ್ಥಿಸಿಕೊಂಡರೆ, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ವರ್ಮಾ ಅವರ ಬಂಧನಕ್ಕೆ ಆಗ್ರಹಿಸಿದ್ದಾರೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಡಿಸಿಎಂ ನಡೆ ಖಂಡಿಸಿ, ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕರಿಗೆ ಉತ್ತರದಾಯಿಗಳಾಗಿರಬೇಕು ಎಂದು ಟೀಕಿಸಿದ್ದಾರೆ.