
ಆಗಸ್ಟ್ 28 ರಿಂದ ಯುಎಇಯ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಹಿಳಾ ಏಷ್ಯಾಕಪ್ನ 10ನೇ ಆವೃತ್ತಿ ಆರಂಭವಾಗಿದ್ದು, ಒಟ್ಟು 8 ತಂಡಗಳು ಭಾಗವಹಿಸುತ್ತಿವೆ.
ಭಾರತ ತಂಡವು ಆಗಸ್ಟ್ 30 ರಂದು ಥೈಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಸೆಪ್ಟೆಂಬರ್ 13 ರಂದು ಫೈನಲ್ ಪಂದ್ಯ ನಡೆಯಲಿದೆ.
ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿದ್ದು, ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ರಾತ್ರಿ 8 ಗಂಟೆಗೆ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.