
ಕರ್ನಾಟಕ ವಿಧಾನ ಪರಿಷತ್ನ ನೂತನ ಸಭಾ ನಾಯಕರಾಗಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಹಂಗಾಮಿ ಸಭಾಪತಿ ಪುಟ್ಟಣ್ಣ ಅಧಿಕೃತವಾಗಿ ಘೋಷಿಸಿದ್ದಾರೆ.
ವಿಧಾನಮಂಡಲ ಅಧಿವೇಶನದ ಮೊದಲ ದಿನದ ಕಲಾಪದಲ್ಲಿ ಈ ಘೋಷಣೆ ನಡೆದಿದ್ದು, ಯತೀಂದ್ರ ಅವರು ತಮ್ಮ ಹೊಸ ಜವಾಬ್ದಾರಿಯನ್ನು ಸ್ವೀಕರಿಸಿದ್ದಾರೆ.
ತಮ್ಮ ಅನುಭವದ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶನ ನೀಡುವಂತೆ ಯತೀಂದ್ರ ಅವರು ಆಡಳಿತ ಮತ್ತು ವಿಪಕ್ಷ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.