
ಬಳ್ಳಾರಿ ನಗರದಲ್ಲಿ ಇತ್ತೀಚೆಗೆ ನಡೆದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ.
ನಗರದೊಳಗೆ ಟಿಪ್ಪರ್ ಲಾರಿಗಳ ಸಂಚಾರ ನಿಯಂತ್ರಿಸುವಂತೆ ಮಾಜಿ ಸಚಿವ ಬಿ. ಶ್ರೀರಾಮುಲು ಹಾಗೂ ಜಿ.ಸೋಮಶೇಖರ ರೆಡ್ಡಿ ಆಗ್ರಹಿಸಿದ್ದಾರೆ.
ಅಕ್ರಮ ಅದಿರು, ಗ್ರಾವೆಲ್ ಹಾಗೂ ಮರಳು ಸಾಗಾಟಗಾರರ ಅನುಕೂಲಕ್ಕಾಗಿ ನಗರದೊಳಗೆ ಟಿಪ್ಪರ್ ಲಾರಿಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.