
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರಮುಖ ಆರೋಪಿಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಯಾವುದೇ ಸಮರ್ಪಕ ಕಾರಣವಿಲ್ಲದೆ ಸುಮಾರು 13.2 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಪ್ರಕರಣದ ಕುರಿತು ಸಮಗ್ರ ತನಿಖೆಯಾಗಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.