
ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 11.50ರ ಸುಮಾರಿಗೆ ನಾಲ್ಕು ಆಸನಗಳ ಲಘು ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರಲ್ಲಿ ಒಬ್ಬರು ಅನುಭವಿ ಮುಖ್ಯ ಬೋಧಕ ಪೈಲಟ್ ಆಗಿದ್ದು, ಅವರು 3,000 ಗಂಟೆಗಳಿಗೂ ಹೆಚ್ಚು ಕಾಲ ವಿಮಾನ ಹಾರಾಟ ನಡೆಸಿದ ಅನುಭವ ಹೊಂದಿದ್ದರು, ಇನ್ನೊಬ್ಬರು ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ವಿಪತ್ತು ನಿರ್ವಹಣಾ ತಂಡಗಳು ಧಾವಿಸಿದ್ದು, ವಿಮಾನ ಪತನಕ್ಕೆ ಎಂಜಿನ್ ವೈಫಲ್ಯ ಅಥವಾ ಹವಾಮಾನ ವೈಪರೀತ್ಯ ಕಾರಣವೇ ಎಂಬ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ಆರಂಭಿಸಿದೆ.