
ಬೆಂಗಳೂರಿನ ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ಹಳಿ ಮೇಲೆ ನಿಲ್ಲಿಸಿದ್ದ ಎರಡು ಖಾಲಿ ರೈಲು ಬೋಗಿಗಳು ಬೆಂಕಿಗೆ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಮಾಕ್ ಡ್ರಿಲ್ ಉದ್ದೇಶಕ್ಕಾಗಿ ಬಳಸಲಾಗುತ್ತಿದ್ದ ಮತ್ತು ಕಳೆದ ಒಂದು ವರ್ಷದಿಂದ ಹಳಿಯ ಮೇಲೆ ನಿಂತಿದ್ದ ಈ ಬೋಗಿಗಳ ಬೆಂಕಿ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಿಡಿಗೇಡಿಗಳು ಬೋಗಿಗಳಿಗೆ ಬೆಂಕಿ ಹಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ರೈಲ್ವೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.