
ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಒಟ್ಟು 225 ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 28 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 82,485 ರಿಂದ ರೂ. 1,56,745 ರವರೆಗೆ ವೇತನ ದೊರೆಯಲಿದೆ.
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ. 1000 ಹಾಗೂ ಎಸ್ಸಿ, ಎಸ್ಟಿ ಮತ್ತು ದಿವ್ಯಾಂಗರಿಗೆ ರೂ. 250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.