
ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವಿನ ದ್ವಿಪಕ್ಷೀಯ ಸಭೆಯಲ್ಲಿ, ಭಾರತ-ಚೀನಾ ಬಾಂಧವ್ಯಕ್ಕೆ 3 ಪರಸ್ಪರ ಸೂತ್ರಗಳೇ ದಿಕ್ಸೂಚಿಯಾಗಬೇಕು ಎಂದು ಒಪ್ಪಿಕೊಳ್ಳಲಾಗಿದೆ.
ಉಭಯ ದೇಶಗಳು ಪರಸ್ಪರ ಗೌರವ, ಪರಸ್ಪರ ಹಿತಾಸಕ್ತಿ ಮತ್ತು ಪರಸ್ಪರ ಸೂಕ್ಷ್ಮತೆ ಎಂಬ ಮೂರು ತತ್ವಗಳಿಗೆ ಬದ್ಧವಾಗಿರಬೇಕು ಹಾಗೂ ಭಿನ್ನಾಪ್ರಾಯಗಳು ವಿವಾದಗಳಾಗಿ ರೂಪಾಂತರಗೊಳ್ಳಲು ಬಿಡುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಸಂಬಂಧಗಳ ನಿರಂತರ ಸುಧಾರಣೆಗೆ ಮೊದಲ ನಿಯಮವಾಗಿದ್ದು, ಗಡಿ ಸಂಬಂಧಿತ ಹಳೆಯ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.