
ಕರ್ನಾಟಕದ ಒಟ್ಟು 440 ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳ ಪೈಕಿ 428 ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ.
ಸದ್ಯ ಇರುವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಸಿಬ್ಬಂದಿ ಕೊರತೆ ದೊಡ್ಡ ಸವಾಲಾಗಿದ್ದು, ಹೊಸ ಕಾಲೇಜುಗಳನ್ನು ಮಂಜೂರು ಮಾಡುವುದು ಕಷ್ಟಕರವಾಗಿದೆ ಎಂದು ಸಚಿವರು ಸದನಕ್ಕೆ ವಿವರಿಸಿದ್ದಾರೆ.
ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ ಎಂದು ಸಚಿವರು ಭರವಸೆ ನೀಡಿದ್ದು, ಮೂಲಭೂತ ಸೌಕರ್ಯಗಳ ಕೊರತೆಯನ್ನು ಸರ್ಕಾರ ಒಪ್ಪಿಕೊಂಡಿದೆ.