
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 89 ಕೋಟಿ ರೂ.ಗೂ ಅಧಿಕ ಹಣ ದುರ್ಬಳಕೆ ಪ್ರಕರಣದಲ್ಲಿ ಆರೋಪಿ ಕಾಕಿ ಶ್ರೀನಿವಾಸ್ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
32 ವರ್ಷದ ಆರೋಪಿಯು ಕಳೆದ 22 ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದು, 18 ನಕಲಿ ಖಾತೆಗಳ ಸೃಷ್ಟಿ ಹಾಗೂ ನಗದು ಹಣವನ್ನು ಚಿನ್ನವಾಗಿ ಪರಿವರ್ತಿಸಲು ಸಹಕರಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ.
ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠವು, ಆರೋಪಿಯ ಬೆನ್ನುಮೂಳೆಯ ಅನಾರೋಗ್ಯ ಮತ್ತು ವಿಚಾರಣೆ ವಿಳಂಬವಾಗುವ ಸಾಧ್ಯತೆಯನ್ನು ಪರಿಗಣಿಸಿ ಈ ಆದೇಶ ಹೊರಡಿಸಿದೆ.