
ರಾಮನಗರದ ಹೆಜ್ಜಾಲ ಬಳಿ ಅಕ್ರಮವಾಗಿ ನಡೆಯುತ್ತಿದ್ದ ನಕಲಿ ಔಷಧ ತಯಾರಿಕೆ ಮತ್ತು ಮರು-ಪ್ಯಾಕಿಂಗ್ ಘಟಕದ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ದಾಳಿ ನಡೆಸಿದೆ.
ಈ ಕಾರ್ಯಾಚರಣೆಯಲ್ಲಿ ಖ್ಯಾತ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ಮಾರಾಟ ಮಾಡಲು ಸಿದ್ಧಪಡಿಸಿದ್ದ 5 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ಮಾತ್ರೆಗಳು ಮತ್ತು ಕಚ್ಚಾವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಯಾವುದೇ ಸರ್ಕಾರಿ ಪರವಾನಗಿ ಇಲ್ಲದೆ ನಡೆಯುತ್ತಿದ್ದ ಈ ದಂಧೆಯನ್ನು ಆಯುಕ್ತ ಕೆ. ಶ್ರೀನಿವಾಸ್ ಮತ್ತು ಅಪರ ಔಷಧ ನಿಯಂತ್ರಕ ಡಾ. ಉಮೇಶ್ ನೇತೃತ್ವದ ತಂಡ ಪತ್ತೆ ಹಚ್ಚಿ ಸೀಲ್ ಮಾಡಿದೆ.