
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿಯ ತಿಮ್ಮಸಂದ್ರ ಗ್ರಾಮದಲ್ಲಿ ಬೆಳಗಿನ ಜಾವ ಚಿರತೆಯೊಂದು ಪ್ರತ್ಯಕ್ಷವಾಗಿದೆ.
ಮನೆಯೊಂದಕ್ಕೆ ನುಗ್ಗಿದ ಚಿರತೆ ಕೋಳಿಯನ್ನು ಹಿಡಿದು ತೆಂಗಿನ ಮರವೇರಿ ಕುಳಿತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಹಿಡಿಯಲು ಬೋನ್ ಇರಿಸಿದ್ದಾರೆ.