
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಐಡಿ ನಡುವೆ ತೀವ್ರ ಸಂಘರ್ಷ ಮುಂದುವರಿದಿದೆ.
ಇಡಿ ವಶಪಡಿಸಿಕೊಂಡಿರುವ ಪ್ರಮುಖ ದಾಖಲೆಗಳು ಹಾಗೂ ಸಿಸಿಟಿವಿ ಡಿವಿಆರ್ಗಳನ್ನು ಹಂಚಿಕೊಳ್ಳುವಂತೆ ಕೋರಿ ಸಿಐಡಿ ನ್ಯಾಯಾಲಯದ ಮೊರೆ ಹೋಗಿತ್ತು.
ದಾಖಲೆಗಳನ್ನು ನೀಡುವಂತೆ ಸೆಷನ್ಸ್ ನ್ಯಾಯಾಲಯ ಆದೇಶಿಸಿದ್ದರೂ, ಇಡಿ ಅಧಿಕಾರಿಗಳು ಇದುವರೆಗೆ ಯಾವುದೇ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿಲ್ಲ.